ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Parliament | ಸಂಸತ್ತಿನಲ್ಲಿ ಪರಸ್ಪರ ಕೈಕುಲುಕಿದ ಮೋದಿ-ರಾಹುಲ್

Published 26 ಜೂನ್ 2024, 9:03 IST
Last Updated 26 ಜೂನ್ 2024, 9:03 IST
ಅಕ್ಷರ ಗಾತ್ರ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ.

ಹೊಸ ಸಭಾಧ್ಯಕ್ಷರನ್ನು ಸ್ವಾಗತಿಸುವ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪರಸ್ಪರ ಹಸ್ತಲಾಘವ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಧ್ವನಿ ಮತ ಮೂಲಕ ಪ್ರಸ್ತಾವಕ್ಕೆ ಅನುಮೋದನೆ ಲಭಿಸಿತು.

ಸತತ ಎರಡನೇ ಬಾರಿ ಸ್ಪೀಕರ್ ಆಗಿರುವ ಓಂ ಬಿರ್ಲಾ ಅವರಿಗೆ ಇಡೀ ಸದನದ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. 'ಮುಂದಿನ ಐದು ವರ್ಷಗಳ ಕಾಲ ನಿಮ್ಮ ಮಾರ್ಗದರ್ಶನವನ್ನು ಎದುರು ನೋಡುತ್ತಿದ್ದೇನೆ. ನಿಮ್ಮ ನಗು ಮುಖ ಇಡೀ ಸದನವನ್ನು ಸಂತೋಷವಾಗಿರಿಸುತ್ತದೆ' ಎಂದು ಹೇಳಿದ್ದಾರೆ.

ವಿರೋಧ ಪಕ್ಷ ಹಾಗೂ 'ಇಂಡಿಯಾ' ಮೈತ್ರಿಕೂಟದ ಪರವಾಗಿ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದರು. 'ನೀವು ಜನರ ಧ್ವನಿಯ ಅಂತಿಮ ತೀರ್ಪುಗಾರರು. ಸರ್ಕಾರಕ್ಕೆ ರಾಜಕೀಯ ಬಲ ಇರಬಹುದು. ಆದರೆ ವಿಪಕ್ಷಗಳು ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ನಿಮ್ಮ ಕರ್ತವ್ಯಕ್ಕೆ ವಿಪಕ್ಷಗಳು ನೆರವಾಗಲು ಬಯಸುತ್ತದೆ. ಸದನದಲ್ಲಿ ಮಾತನಾಡಲು ನೀವು ನಮಗೆ ಅವಕಾಶ ನೀಡುತ್ತೀರಿ ಎಂಬ ನಂಬಿಕೆಯಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT