ನವದೆಹಲಿ: ಸಂಸತ್ತಿನಲ್ಲಿ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಎಂಟು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ.

ಬುಧವಾರ ಕಲಾಪ ನಡೆಯುತ್ತಿದ್ದಾಗ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗಿ ಗದ್ದಲ ಸೃಷ್ಟಿಸಿದ್ದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು. ಇದೇ ಸಮಯದಲ್ಲಿ ಸಂಸತ್ನ ಹೊರಗೂ ಇಬ್ಬರು ಪ್ರತಿಭಟನೆ ನಡೆಸಿದ್ದಾರೆ.

ಕೃತ್ಯದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಮೈಸೂರು ನಿವಾಸಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ.
.ಸಂಸತ್ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು.ಭದ್ರತಾ ಲೋಪ: ಗುರುತಿನ ಚೀಟಿ ಇಲ್ಲದೆ ನೀಲಂ ಸಂಸತ್ ಆವರಣ ಪ್ರವೇಶಿಸಿದ್ದು ಹೇಗೆ?.
ಪ್ರಕರಣ ಸಂಬಂಧ ದೆಹಲಿ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಭಯ ಸದನಗಳಲ್ಲಿ ಚರ್ಚೆಗೆ ಆಗ್ರಹ
ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೊಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿರುವ ಕಾಂಗ್ರೆಸ್ ಸಂಸದ ಮಾಣಿಕ್ರಾಮ್ ಟಾಗೋರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
.ಲೋಕಸಭೆ: ಭದ್ರತೆ ಭೇದಿಸಿ ಸದನಕ್ಕೆ ಜಿಗಿದರು!.ಆಳ–ಅಗಲ: ಸಂಸತ್ ಭವನದ ಭದ್ರತೆ ಬಿಗಿಯಾಗಿದ್ದರೂ ಲೋಪ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.