ಮುಂಬೈ: ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ 38 ವರ್ಷದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಯಿಂದ ಮುಂಬೈಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಮಾರು 176 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ದೆಹಲಿ ವಿಮಾನ ನಿಲ್ದಾಣದಿಂದ ಸಂಜೆ 5.15 ಗಂಟೆಗೆ ಮುಂಬೈಗೆ ಹೊರಟಿತು. ವಿಮಾನ ನಿಲ್ದಾಣದಲ್ಲಿ ಇಳಿಯುವ 50 ನಿಮಿಷಗಳ ಮೊದಲು ಉತ್ತರ ಪ್ರದೇಶ ನಿವಾಸಿ ಖಲೀಲ್ ಕಾಜಮ್ಮುಲ್ ಖಾನ್ ಎಂಬ ಪ್ರಯಾಣಿಕ ಶೌಚಾಲಯಕ್ಕೆ ಹೋಗಿದ್ದು, ಧೂಮಪಾನ ಮಾಡಿದ್ದಾರೆ. ಇದು ಸ್ಮೋಕ್ ಸೆನ್ಸರ್ ಮೂಲಕ ವಿಮಾನ ಸಿಬ್ಬಂದಿಗೆ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕ ಹೊರಗೆ ಬಂದ ಬಳಿಕ ವಿಮಾನ ಸಿಬ್ಬಂದಿ ಶೌಚಾಲಯದಲ್ಲಿ ಪರಿಶೀಲನೆ ನಡೆಸಿದ್ದು, ಸಿಗರೇಟ್ ತುಂಡು ಮತ್ತು ಬೆಂಕಿಕಡ್ಡಿ ಪತ್ತೆಯಾಗಿವೆ. ಈ ಕುರಿತು ಪ್ರಯಾಣಿಕನನ್ನು ವಿಮಾನ ಸಿಬ್ಬಂದಿ ವಿಚಾರಣೆ ನಡೆಸಿದಾಗ, ಖಾನ್ ಧೂಮಪಾನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ನಂತರ ಘಟನೆ ಕುರಿತು ವಿಮಾನ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ ಬಳಿಕ, ವಿಷಯವನ್ನು ಭದ್ರತಾ ಸಿಬ್ಬಂದಿಗೆ ತಿಳಿಸಲಾಗಿದೆ. ಖಾನ್ ಅವರನ್ನು ಸಹರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ವಿಮಾನ ನಿಯಮಗಳ ಅಡಿಯಲ್ಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.