ಮುಂಬೈ: ಆತಂಕದ ಬೆಳವಣಿಗೆಯೊಂದರಲ್ಲಿ ಇಲ್ಲಿನ ಘಾಟ್ಕೊಪರ್‌ನ ರಾಜವಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಯು ಕಚ್ಚಿದ್ದರಿಂದಾಗಿ ಯುವಕನೊಬ್ಬ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಘಟನೆಯ ಹಿಂದೆಯೇ ಬೃಹತ್ ಮುಂಬೈ ಮಹಾನಗರಪಾಲಿಕೆ (ಬಿಎಂಸಿ) ಕಾರ್ಯವೈಖರಿ ಕುರಿತಂತೆ ತೀವ್ರ ಟೀಕೆ ವ್ಯಕ್ತವಾಗಿದೆ.

ಮೃತನನ್ನು 24 ವರ್ಷದ ಶ್ರೀನಿವಾಸ ನಾಗೇಶ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ರಕ್ತದಲ್ಲಿ ಹಿಮೊಗ್ಲೋಬಿನ್ ಅಂಶ ಕಡಿಮೆಯಾಗಿದ್ದರಿಂದ ಚಿಕಿತ್ಸೆಗಾಗಿ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮದ್ಯವ್ಯಸನಿಯಾಗಿದ್ದ ಅವರು ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು.

ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ವಿದ್ಯಾ ಠಾಕೂರ್ ಪ್ರಕಾರ, ರೋಗಿಯು ಬುಧವಾರ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ. ಈ ಘಟನೆಯ ಹಿಂದೆಯೇ ಆಸ್ಪತ್ರೆಯ ಆಡಳಿತವು ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಮುಂಬೈನ ಮೇಯರ್ ಕಿಶೋರಿ ಪೆಡ್ನೆಕರ್ ಅವರು ತನಿಖೆಗೆ ಆದೇಶಿಸಿದ್ದು, ಘಟನೆ ಕುರಿತು ವಿಸ್ತೃತ ವರದಿ ಸಲ್ಲಿಸಬೇಕು ಎಂದು ಆಸ್ಪತ್ರೆಯ ಆಡಳಿತಕ್ಕೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.