ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬವಿಲ್ಲ ಎಂಬ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಟೀಕೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅವರಂತಹ ಹಿರಿಯ ನಾಯಕರಿಂದ ಜನರು ಇಂತಹ ಹೇಳಿಕೆಯನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕೀಯದಲ್ಲಿ ಘನತೆ ಕಾಯ್ದುಕೊಳ್ಳುವುದು ಅಗತ್ಯ. ಇಡೀ ದೇಶವೇ ಮೋದಿ ಅವರನ್ನು ಅವರ ಕುಟುಂಬ ಎಂದು ಪರಿಗಣಿಸಿದೆ. ಇಡೀ ದೇಶವೇ ನನ್ನ ಕುಟುಂಬ ಎಂದು ಪ್ರಧಾನಿ ಮೋದಿ ಅವರು ಸರಿಯಾಗಿ ಹೇಳಿದ್ದಾರೆ. ಇಂತಹ ಕ್ಷುಲ್ಲಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಮತ್ತು ಅತ್ಯಂತ ಖಂಡನೀಯ’ ಎಂದು ಅವರು ಹೇಳಿದ್ದಾರೆ.

ಲಾಲು ಪ್ರಸಾದ್ ಅವರು ದಶಕಗಳ ಕಾಲ ರಾಜಕೀಯದಲ್ಲಿ ಕಳೆದಿದ್ದಾರೆ. ರಾಜ್ಯದ ಸಿಎಂ ಕೂಡ ಆಗಿದ್ದರು. ಜನರು ಅವರಂತಹ ಹಿರಿಯ ನಾಯಕರಿಂದ ಇಂತಹ ಹೇಳಿಕೆಗಳನ್ನು ನಿರೀಕ್ಷೆ ಮಾಡಿರಲಿಲ್ಲ. ಇಂತಹ ಹೇಳಿಕೆಗಳು ಜನರನ್ನು ನಿರಾಶೆಗೊಳಿಸಿದೆ. ರಾಜಕೀಯದಲ್ಲಿ ಘನತೆ ಕಾಪಾಡಿಕೊಳ್ಳಬೇಕು. ಪ್ರಧಾನಿ ಅವರ ವಿರುದ್ಧ ಹೇಳಿಕೆ ನೀಡಿರುವ ಆರ್‌ಜೆಡಿ ನಾಯಕರಿಗೆ ಬಿಜೆಪಿ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೀತಾರಾಮನ್ ತಿಳಿಸಿದ್ದಾರೆ.

ಪಟ್ನಾದಲ್ಲಿ ಭಾನುವಾರ ನಡೆದ ರ‍್ಯಾಲಿ ಸಂದರ್ಭದಲ್ಲಿ ಲಾಲು ಪ್ರಸಾದ್ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದರು. ಪ್ರಧಾನಿ ಅವರು ಕುಟುಂಬ ರಾಜಕಾರಣದ ವಿಚಾರದಲ್ಲಿ ವಿರೋಧ ಪಕ್ಷಗಳನ್ನು ಟೀಕಿಸುತ್ತಿರುವುದಕ್ಕೆ ಪ್ರತಿಯಾಗಿ ಲಾಲು ಈ ಮಾತುಗಳನ್ನಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.