ನವದೆಹಲಿ: ಒಂದು ವೇಳೆ ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಯಾವತ್ತೂ ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಅಧಿಕಾರದಲ್ಲಿ ಇರುವುದಿಲ್ಲ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ಕರ್ನಾಟಕ ಚುನಾವಣೆ ಬಳಿಕ, ದೇಶದಾದ್ಯಂತ ಒಂದು ಅಲೆ ಪ್ರಾರಂಭವಾಗಿದೆ. ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರ ದಿನಗಳು ಮುಗಿಯುತ್ತಿವೆ ಎಂದು ಜನ ಹೇಳಲು ಶುರು ಮಾಡಿದ್ದಾರೆ. ಒಂದು ವೇಳೆ ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಎಂದೂ ನಮ್ಮನ್ನು ಕ್ಷಮಿಸಲಾರರು ಎಂದು ಅವರು ಹೇಳಿದರು.

‘ಕರ್ನಾಟಕದ ಕಾಂಗ್ರೆಸ್ ಗೆಲುವನ್ನು ಇಡೀ ದೇಶ ಸಂಭ್ರಮಿಸುತ್ತಿದೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಯನ್ನು ಜನ ಪ್ರೀತಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸತ್ಯದ ದ್ಯೋತಕ‘ ಎಂದು ಅವರು ಬಣ್ಣಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.