ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನದಲ್ಲಿ ಪ್ರಯಾಣಿಕರು ‘ಹನುಮಾನ್ ಚಾಲೀಸಾ' ಪಠಿಸಿ ಸಂಭ್ರಮಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಸಾರ್ವಜನಿಕರ ಗಮನ ಸೆಳೆದಿದೆ.

ವಿಮಾನ ನಿಲ್ದಾಣದ ಮೊದಲ ಹಂತವನ್ನು ₹1450 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಸೇರಿದಂತೆ ಗಣ್ಯರು ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.
.ಅಯೋಧ್ಯೆ: ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ.ಅಯೋಧ್ಯ ಧಾಮ ರೈಲು ನಿಲ್ದಾಣ ಲೋಕಾರ್ಪಣೆ, 8 ರೈಲುಗಳಿಗೆ ಚಾಲನೆ ನೀಡಿದ ಪಿಎಂ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.