ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತೀಯರ ‌‌ಸಂಕಲ್ಪವೇ ದೇಶದ ಅತಿ ದೊಡ್ಡ ಶಕ್ತಿಯಾಗಿದೆ: ಪ್ರಧಾನಿ ಮೋದಿ

Published : 7 ಜುಲೈ 2024, 11:25 IST
Last Updated : 7 ಜುಲೈ 2024, 11:25 IST
ಫಾಲೋ ಮಾಡಿ
Comments

ನವದೆಹಲಿ: ಎಲ್ಲಾ ಕ್ಷೇತ್ರಗಳಲ್ಲಿಯೂ ಭಾರತೀಯರು ಅತ್ಯುತ್ತಮ ಕೆಲಸ ಮಾಡುವ ಮೂಲಕ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಅವರ ‌‌ಉತ್ಸಾಹವೇ ದೇಶದ ಅತಿ ದೊಡ್ಡ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಜೈನ್ ಇಂಟರ್‌ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್‌ನ (ಜಿಐಟಿಒ) ಸಂಸ್ಥಾಪನಾ ದಿನದ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ಮೋದಿ ಪತ್ರ ಬರೆಯುವ ಮೂಲಕ ಶ್ಲಾಫಿಸಿದ್ದಾರೆ.

ಭಾರತದ ಬಗ್ಗೆ ವಿಶ್ಚದಾದ್ಯಂತ ಕಂಡು ಬರುತ್ತಿರುವ ಆಶಾವಾದ ಮತ್ತು ನಂಬಿಕೆಯು ದೇಶದ ಶಕ್ತಿಯ ಪತ್ರಿರೂಪವಾಗಿದೆ. ದೇಶದ ಜನರು ವಿವಿಧ ಕ್ಷೇತ್ರಗಳಲ್ಲಿ ಭಾಗವಹಿಸುವಿಕೆಯ ಮೂಲಕ ದೇಶದ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ.

ಬಾಹ್ಯಾಕಾಶ ವಿಜ್ಞಾನ, ರಕ್ಷಣಾ ಕ್ಷೇತ್ರ ಮತ್ತು ವ್ಯಾಪಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮ ಕೆಲಸಗಳು ಸಾಗಿವೆ. ಜಿಐಟಿಒ ಅಂತಹ ಸಂಸ್ಥೆಗಳು ಸಹ ಕಳೆದ ದಶಕದಿಂದಲೂ ಸೇವೆ ಒದಗಿಸುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿವೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ತಂತ್ರಜ್ಞಾನ ಕ್ಷೇತ್ರ ಸೇರಿದಂತೆ 2024ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಗುರಿಯನ್ನು ಹೊಂದಿದೆ ಎಂದು ಮೋದಿ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಜಯ್ ಶೇಖರ್ ಶರ್ಮಾ (ಪೇಟಿಎಂ), ಆದಿತ್ ಪಲಿಚಾ (ಜೆಪ್ಟೋ), ಮತ್ತು ಸಂಜೀವ್ ಬಿಖ್‌ಚಂದಾನಿ (ಇನ್‌ಫೋಡ್ಜ್) ಸೇರಿದಂತೆ ವಿವಿಧ ವಲಯಗಳ ಪ್ರಮುಖರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT