ಮುಜಾಫರ್‌ಪುರ: ಆರ್‌ಎಸ್‌ಎಸ್ ಸರ ಸಂಘಚಾಲಕ ಮೋಹನ್ ಭಾಗವತ್ ಅವರು ಇತ್ತೀಚೆಗೆ ಮಾಡಿದ್ದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ನ್ಯಾಯಾಲಯದಲ್ಲಿ ಮಂಗಳವಾರ ದೂರು ದಾಖಲಿಸಲಾಗಿದೆ.

ಮುಂಬೈನಲ್ಲಿ ಸೋಮವಾರ ನಡೆದಿದ್ದ ಕಾರ್ಯಕ್ರಮವೊಂದ ರಲ್ಲಿ ಭಾಗವಹಿಸಿದ್ದ ಭಾಗವತ್ ಅವರು ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲ ಸುಧೀರ್ ಕುಮಾರ್ ಓಜಾ ಅವರು ಮುಜಾಫರ್‌ಪುರದ ಸಿಜೆಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥರು ತಮ್ಮ ಮರಾಠಿ ಭಾಷಣದಲ್ಲಿ, ‘ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಕಠಿಣ ಜಾತಿ ವ್ಯವಸ್ಥೆಗೆ ಪಂಡಿತರು (ಪುರೋಹಿತ ವರ್ಗ) ಕಾರಣಕರ್ತರು’ ಎಂದು ದೂಷಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇದೇ 20ಕ್ಕೆ ನಿಗದಿಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.