ನವದೆಹಲಿ: ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿಮೆ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ, ಸದಸ್ಯರೊಬ್ಬರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಾಗತಿಕ ಪರಿಸ್ಥಿತಿ ಹಾಗೂ ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಏರಿಕೆಯ ಹೊರತಾಗಿಯೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ, ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಕಡಿಮೆ ಇದೆ ಎಂದಿದ್ದಾರೆ.

ಅಲ್ಲದೇ 2021 ಹಾಗೂ 2022ರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಣನೀಯವಾಗಿ ಏರಿಕೆಯಾದದೂ, ಭಾರತದಲ್ಲಿ ಕೇವಲ ಶೇ 2 ರಷ್ಟು ಮಾತ್ರ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಕೆ ಮಾಡಿದ ಬಳಿಕ ಹಲವು ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿದೆ. ವಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ಬೆಲೆ ಇಳಿಕೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನ್ಯಾಯಯುತವಾಗಿರಬೇಕು ಎಂದು ಕೇಂದ್ರ ಸರ್ಕಾರ ಬಯಸುತ್ತದೆ. ಇದೇ ಕಾರಕ್ಕೆ 2021ರ ನವೆಂಬರ್ ಹಾಗೂ 2022ರ ಮೇ ತಿಂಗಳಿನಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ ಎಂದಿದ್ದಾರೆ.

‘ಕೆಲವೊಂದು ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಿದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳು ಮಾತ್ರವಲ್ಲದೇ, ಇನ್ನೆರಡು ರಾಜ್ಯಗಳೂ ಕೂಡ ವ್ಯಾಟ್ ಇಳಿಕೆ ಮಾಡಿದೆ. ಕೆಲವೊಂದು ರಾಜ್ಯಗಳು ₹ 17 ವ್ಯಾಟ್ ವಿಧಿಸುತ್ತಿದ್ದರೆ, ಬಿಜೆಪಿಯೇತರ ರಾಜ್ಯಗಳಲ್ಲಿ ₹ 32 ಇದೆ‘ ಎಂದು ಪುರಿ ನುಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.