ರಾಂಚಿ:ಇದು ಕೇವಲ ಟ್ರೇಲರ್ , ಫುಲ್ ಸಿನಿಮಾ ಇನ್ನೂ ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 100 ದಿನಗಳಲ್ಲಿ ಈಗ ಕೆಲವರನ್ನೇ ಕಂಬಿ ಹಿಂದೆ ಕಳುಹಿಸಲಾಗಿದೆ. ಇದು ಕೇವಲ ಟ್ರೇಲರ್ ಮಾತ್ರ ಎಂದು ಪ್ರಧಾನಿ ಹೇಳಿದ್ದಾರೆ.

ಜಾರ್ಖಂಡ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಪಿಕ್ಚರ್ ಅಭಿ ಬಾಕಿ ಹೈ ಎಂದಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದೇವೆ.ನಮ್ಮ ಹೋರಾಟ ಭ್ರಷ್ಟಾಚಾರದ ವಿರುದ್ಧ ಹಾಗೂ ಭ್ರಷ್ಟಾಚಾರದ ಚಟುವಟಿಕೆಗಳ ವಿರುದ್ಧ.ಸಾರ್ವಜನಿಕರ ಹಣವನ್ನು ಲೂಟಿ ಮಾಡಲು ಯತ್ನಿಸಿದವರಿಗೆ ಸರಿಯಾದ ಜಾಗ ತೋರಿಸಿದ್ದೇವೆ ಎಂದಿದ್ದಾರೆ.

ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಜಾರ್ಖಂಡ್ನಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಇದರ ಪೂರ್ವಭಾವಿಯಾಗಿ ಸಾರ್ವಜನಿಕ ಸಭೆ ಹಾಗೂ ಮೆರವಣಿಗೆ ಏರ್ಪಡಿಸಲಾಗಿತ್ತು.

ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ, ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್ 21ರಂದು ದೆಹಲಿಯ ಅವರ ನಿವಾಸದಲ್ಲಿ ಬಂಧಿಸಿದ ಸಿಬಿಐ ನಂತರ ವಿಚಾರಣೆ ನಡೆಸಿದ್ದು ಈಗ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. 2007ರಲ್ಲಿ ವಿದೇಶಿ ಬಂಡವಾಳವನ್ನು ಐಎನ್ ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ ಹೂಡಿಕೆ ಮಾಡಲು ಸರ್ಕಾರದ ಪರವಾಗಿ ಲಂಚ ಪಡೆದು ಒಪ್ಪಿಗೆ ನೀಡಲಾಗಿದೆ ಎಂದು ಚಿದಂಬರಂ ವಿರುದ್ಧ ಆರೋಪಿಸಲಾಗಿದೆ. ಆ ಸಮಯದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿತ್ತು. ಪಿ.ಚಿದಂಬರಂ ಅವರು ವಿತ್ತ ಸಚಿವರಾಗಿದ್ದರು.

ಇದನ್ನೂ ಓದಿ...ಐಎನ್ಎಕ್ಸ್ ಮೀಡಿಯಾ ಪ್ರಕರಣ:ಪಿ.ಚಿದಂಬರಂ ಸಿಬಿಐ ವಶಕ್ಕೆ

ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಆರೋಪಿಗಳಾಗಿದ್ದು ಇವರು ಈ ಆರೋಪಗಳೆಲ್ಲವೂ ನಿರಾಧಾರ ಮತ್ತು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಪಿತೂರಿ, ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.