ನವದೆಹಲಿ: ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಕೋರಿ, ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ.

ಆಮ್ ಅದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಕೇಜ್ರಿವಾಲ್ ಅವರು, ಅಬಕಾರಿ ನೀತಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದರಿಂದ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು. ಇದರ ಬೆನ್ನಲ್ಲೇ, ಅವರ ನಿವಾಸಕ್ಕೆ ಭೇಟಿ ನೀಡಿದ ಇ.ಡಿ. ತಂಡ, ಶೋಧ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.

ಇದರೊಂದಿಗೆ ಕೇಜ್ರಿವಾಲ್ ಅವರು, ಸ್ವಾತಂತ್ರ್ಯಾ ನಂತರದಲ್ಲಿ ಅಧಿಕಾರದಲ್ಲಿದ್ದಾಗಲೇ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೊಳಗಾಗಿದ್ದಾರೆ.

ಆದಾಗ್ಯೂ, 'ಕೇಜ್ರಿವಾಲ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ' ಎಂದು ಎಎಪಿ ಹೇಳಿಕೆ ನೀಡಿದೆ.

ಕೇಜ್ರಿವಾಲ್ ಬಂಧನದ ಬೆನ್ನಲ್ಲೇ, ದೆಹಲಿ ಸಚಿವರು, ಎಎಪಿ ನಾಯಕರು ಮತ್ತು ಕಾರ್ಯಕರ್ತರು ಆದಾಯ ತೆರಿಗೆ ಇಲಾಖೆ ಹಾಗೂ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ', ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ, ವಿರೋಧ ಪಕ್ಷಗಳಿಗೆ ತೊಂದರೆ ನೀಡಲಾರಂಭಿಸಿದೆ ಎಂದು ಗುಡುಗಿದೆ.
.ಅವರ ಕೃತ್ಯವೇ ಅವರಿಗೆ ಮುಳುವಾಗಿದೆ: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ.ಜೈಲಿನಿಂದಲೇ ಕೇಜ್ರಿವಾಲ್ ಸರ್ಕಾರ ನಡೆಸಲಿದ್ದಾರೆ: ಎಎಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.