ನವದೆಹಲಿ: ’ಬಿಜೆಪಿಯು 10 ವರ್ಷಗಳಿಂದ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತಕ್ಕೆ ಸೇರಿಸುವುದರಿಂದ ಅವರನ್ನು ತಡೆದದ್ದು ಯಾರು’ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಪ್ರಶ್ನಿಸಿದರು.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯು ಅಧಿಕಾರಕ್ಕೇರಿದ ಕೂಡಲೇ ಪಿಒಕೆಯು ಭಾರತದ ಭಾಗವಾಗಲಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಚೆಗೆ ನೀಡಿದ್ದ ಹೇಳಿಕೆಗೆ ಅವರು ತಿರುಗೇಟು ಕೊಟ್ಟರು.

‘ಒಂದು ರಾಜ್ಯದ ಮುಖ್ಯಮಂತ್ರಿಯೊಬ್ಬರು ಚುನಾವಣೆಯ ಸಮಯದಲ್ಲಿ ಏಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂಬುದು ನನಗೆ ಆಶ್ಚರ್ಯ ಉಂಟುಮಾಡಿದೆ. ಪೂರ್ಣ ಬಹುಮತದೊಂದಿಗೆ ಕೇಂದ್ರದಲ್ಲಿ 10 ವರ್ಷ ಅಧಿಕಾರದಲ್ಲಿದ್ದ ಸಮಯದಲ್ಲಿ ಅವರು ಈ ಕೆಲಸವನ್ನು ಏಕೆ ಮಾಡಿಲ್ಲ? ಪಿಒಕೆಯನ್ನು ಭಾರತಕ್ಕೆ ಸೇರಿಸುವ ಕುರಿತ ಸರ್ವಾನುಮತದ ನಿರ್ಣಯವನ್ನು ಸಂಸತ್ತು ಮೊದಲ ಬಾರಿಗೆ 1994ರಲ್ಲಿ ಅಂಗೀಕರಿಸಿತ್ತು. ಆಗ ಕಾಂಗ್ರೆಸ್ ಅಧಿಕಾರದಲ್ಲಿತ್ತು ಎಂಬುದನ್ನು ನಿಮಗೆ ನೆನಪಿಸುತ್ತಿದ್ದೇನೆ’ ಎಂದರು.

‘ಪ್ರತಿ ಬಾರಿಯೂ ಚುನಾವಣೆಯ ಸಮಯದಲ್ಲಿ ಜನರ ಭಾವನೆಗಳನ್ನು ಕೆರಳಿಸಲು ಮತ್ತು ನೈಜ ವಿಷಯಗಳಿಂದ ಅವರ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾಯಕರು ಇಂತಹ ವಿಷಯಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುತ್ತಾರೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.