ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವದ ಪ್ರತಿಕ್ರಿಯೆ ಬಹಳ ನಿರಾಶಾದಾಯಕವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಟೀಕಿಸಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಎ ಕುರಿತು ತಮಗೆ ಗೊತ್ತಿಲ್ಲ ಎಂಬಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತಿಸುತ್ತಿದ್ದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೆಪಮಾತ್ತಕ್ಕೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ’ ಎಂದು ಹೇಳಿದರು.

‘ಚುನಾವಣೆ ಲಾಭದ ಉದ್ದೇಶದಿಂದ, ಸಿಎಎ ವಿಚಾರವಾಗಿ ಸಿಪಿಎಂ ಪಕ್ಷ ಮುಸ್ಲಿಂ ಓಲೈಕೆಯಲ್ಲಿ ತೊಡಗಿದೆ’ ಎಂಬ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ತನ್ನ ಚುನಾವಣಾ ಲಾಭಕ್ಕಾಗಿಯೇ ಬಿಜೆಪಿಯು ದೇಶದಲ್ಲಿ ಕೋಮುಗಳ ವಿಭಜನೆಗೆ ಯತ್ನಿಸುತ್ತಿದೆ’ ಎಂದರು.

‘ಸಿಎಎ ವಿರೋಧಿಸಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನೆಗಳಿಗೆ ಸಂಬಂಧಿಸಿ ದಾಖಲಿಸಲಾಗಿರುವ ಬಹುತೇಕ ಪ್ರಕರಣಗಳನ್ನು ಇನ್ನೂ ಹಿಂಪಡೆಯಲಾಗಿಲ್ಲ ಎಂಬ ಕಾಂಗ್ರೆಸ್ ಆರೋಪ ಆಧಾರರಹಿತ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.