ನವದೆಹಲಿ: ‘ಅಂಗವಿಕಲರಿಗೆ ಸಮಾನ ಅವಕಾಶ ಒದಗಿಸಬೇಕು ಹಾಗೂ ಅವರಿಗೆ ಎಲ್ಲ ಸೌಲಭ್ಯಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ವಿಶ್ವ ಅಂಗವಿಕಲರ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.

‘ಅಂಗವಿಕಲರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು, ಅವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಭಾರತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ’ ಎಂದೂ ಅವರು ಹೇಳಿದ್ದಾರೆ.

‘ಅಂಗವಿಕಲ ವ್ಯಕ್ತಿಗಳಲ್ಲಿರುವ ಧೈರ್ಯ, ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಿ, ಪುಟಿದೇಳುವ ಅವರ ಗುಣ ನಮಗೆ ಸದಾ ಸ್ಫೂರ್ತಿ’ ಎಂದು ಟ್ವೀಟ್ ಮಾಡಿದ್ದಾರೆ.

‘ವಿಶ್ವಸಂಸ್ಥೆಯ ಧ್ಯೇಯ ವಾಕ್ಯದಂತೆ ಅಂಗವಿಕಲರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು’ ಎಂದಿದ್ದಾರೆ.

ಪ್ರತಿ ವರ್ಷ ಡಿಸೆಂಬರ್ 3ರಂದು ಅಂಗವಿಕಲರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ಡಿ. 4ರಂದು ವಿಶ್ವಸಂಸ್ಥೆಯು ಅಂಗವಿಕಲರ ಹಕ್ಕುಗಳ ಕುರಿತ 13ನೇ ಅಧಿವೇಶನವನ್ನು ಆಯೋಜಿಸಿದೆ. ಅಂದೇ ಅಂಗವಿಕಲರ ದಿನಾಚರಣೆಯನ್ನೂ ಹಮ್ಮಿಕೊಳ್ಳುತ್ತಿರುವುದಾಗಿ ವಿಶ್ವಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.