ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಚತೆಯಲ್ಲಿ ಕೇಂದ್ರ ಮಂತ್ರಿ ಪರಿಷತ್ ಸಭೆ ಮಂಗಳವಾರ ನಡೆಯಿತು.

ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಮೇಲ್ವಿಚಾರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಮೂಲಗಳು ಹೇಳಿವೆ.

ಜುಲೈ 7ರಂದು ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಹಾಗೂ ವಿಸ್ತರಣೆ ನಂತರ ನಡೆಯುತ್ತಿರುವ ಮಂತ್ರಿ ಪರಿಷತ್‌ನ ನಾಲ್ಕನೇ ಸಭೆ ಇದಾಗಿದೆ.

ಸಚಿವರಾದ ಗಜೇಂದ್ರ ಶೆಖಾವತ್ ಹಾಗೂ ಪೀಯೂಷ್ ಗೋಯಲ್ ಅವರು ತಮ್ಮ ಸಚಿವಾಲಯಗಳ ಪ್ರಗತಿಯನ್ನು ಸಭೆಯ ಮುಂದಿಟ್ಟರು. ಸರ್ಕಾರದ ಘೋಷಣೆಗಳು, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಮಾಹಿತಿ ನೀಡಿದರು ಎಂದು ಇವೇ ಮೂಲಗಳು ಹೇಳಿವೆ.

ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡುವುದು ಹೇಗೆ ಹಾಗೂ ಯೋಜನೆಗಳಲ್ಲಿ ಯಾವ ರೀತಿ ಸುಧಾರಣೆ ತರಬಹುದು ಎಂಬುದರ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು ಎಂದೂ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.