ಅಹಮದಾಬಾದ್: ಬೆಂಗಳೂರು-ಕಲಬುರಗಿ, ಮೈಸೂರು-ಚೆನ್ನೈ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಇದೇ ವೇಳೆ ತಿರುವನಂತಪುರ-ಕಾಸರಗೋಡು ವಂದೇ ಭಾರತ್ ರೈಲು ಅನ್ನು ಮಂಗಳೂರಿಗೂ ವಿಸ್ತರಿಸಲು ಪ್ರಧಾನಿ ಮೋದಿ ಹಸಿರು ನಿಶಾನೆ ನೀಡಿದ್ದಾರೆ.

ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಚಾಲನೆಯೊಂದಿಗೆ ಕಲಬುರಗಿ ಜನತೆಯ ಬಹುದಿನಗಳ ಬೇಡಿಕೆ ಈಡೇರಿದೆ. ಮತ್ತೊಂದೆಡೆ ಮೈಸೂರು-ಚೆನ್ನೈ ನಡುವೆ ಪ್ರತಿ ದಿನ ಈಗಾಗಲೇ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು, ಇದು ಈ ಮಾದರಿಯ ಎರಡನೇ ರೈಲಾಗಿದೆ. ಮೈಸೂರಿನಿಂದ ವಿದ್ಯುತ್ ಮಾರ್ಗದ ಕಾಮಗಾರಿ ನಿಮಿತ್ತ ಸದ್ಯ ಈ ರೈಲು ಬೆಂಗಳೂರು-ಚೆನ್ನೈ ನಡುವೆ ಸಂಚರಿಸಲಿದ್ದು, ಏಪ್ರಿಲ್ 5ರಿಂದ ಮೈಸೂರಿನಿಂದ ಸೇವೆ ಆರಂಭಿಸಲಿದೆ.

10 ಹೊಸ ವಂದೇ ಭಾರತ್ ರೈಲುಗಳು ಯಾವುವು?

ಅಹಮದಾಬಾದ್-ಮುಂಬೈ ಸೆಂಟ್ರಲ್

ಸಿಕಂದರಾಬಾದ್-ವಿಶಾಖಪಟ್ಟಣ

ಮೈಸೂರು-ಡಾ.ಎಂಜಿಆರ್ ಸೆಂಟ್ರಲ್ (ಚೆನ್ನೈ)

ಪಟ್ನಾ-ಲಖನೌ

ನ್ಯೂ ಜಲ್ಪೈಗುರಿ-ಪಟ್ನಾ

ಪುರಿ-ವಿಶಾಖಪಟ್ಟಣ

ಲಖನೌ-ಡೆಹ್ರಾಡೂನ್

ಕಲಬುರಗಿ-ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು

ರಾಂಚಿ-ವಾರಾಣಸಿ

ಖಜುರಾಹೊ-ದೆಹಲಿ (ನಿಜಾಮುದ್ದೀನ್)

ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಮಂಗಳೂರಿಗೆ ವಿಸ್ತರಣೆ:

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ವಂದೇ ಭಾರತ್ ರೈಲುಗಳ ವಿಸ್ತರಣೆಗೂ ಹಸಿರು ನಿಶಾನೆ ನೀಡಿದ್ದಾರೆ.

ತಿರುವನಂತಪುರ-ಕಾಸರಗೋಡು ವಂದೇ ಭಾರತ್ ರೈಲು ಅನ್ನು ಮಂಗಳೂರಿಗೂ ವಿಸ್ತರಿಸಲಾಗಿದೆ. ಇದರೊಂದಿಗೆ ಅಹಮದಾಬಾದ್-ಜಾಮ್ನಗರ ವಂದೇ ಭಾರತ್ ಅನ್ನು ದ್ವಾರಕಾದವರೆಗೆ, ಅಜ್ಮೀರ್-ದೆಹಲಿ ಸರೈ ರೋಹಿಲ್ಲಾ ವಂದೇ ಭಾರತ್ ಅನ್ನು ಚಂಡೀಗಢದವರೆಗೆ, ಗೋರಖ್ಪುರ-ಲಖನೌ ವಂದೇ ಭಾರತ್ ಅನ್ನು ಪ್ರಯಾಗರಾಜ್ವರೆಗೆ ವಿಸ್ತರಿಸಲಾಗಿದೆ.

₹85 ಸಾವಿರ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ:

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ₹85,000 ಕೋಟಿ ಮೌಲ್ಯದ ರೈಲ್ವೆ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೇರವೇರಿಸಿದ್ದಾರೆ.
.ಮೈಸೂರಿಗೆ ಎರಡು ಹೊಸ ರೈಲು.Vande Bharat Express | ಕಲಬುರಗಿ–ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.