ನವದೆಹಲಿ: ಹಿರೋಷಿಮಾದಲ್ಲಿ ಮೇ 19 ರಿಂದ 21ರವರೆಗೆ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ ಜಪಾನ್‌ಗೆ ಪ್ರಯಾಣಿಸಿದರು.

ಪ್ರಧಾನಿ ಮೋದಿ ವಿಮಾನ ಏರುತ್ತಿರುವ ವಿಡಿಯೊವನ್ನು ಅವರ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಜಪಾನ್ ಪ್ರವಾಸದ ನಂತರ ಮೋದಿ ಅವರು ಪಪುವಾ ನ್ಯೂಗಿನಿಗೆ ಪ್ರಯಾಣಿಸಲಿದ್ದು, ಅಲ್ಲಿ ಪ್ರಧಾನಿ ಜೇಮ್ಸ್ ಅವರೊಂದಿಗೆ ಜಂಟಿಯಾಗಿ ಭಾರತ–ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯ (ಎಫ್ಐಪಿಐಸಿ) ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

22 ರಿಂದ 24 ರವರೆಗೆ ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ ನೀಡಲಿದ್ದಾರೆ. ದ್ವಿಪಕ್ಷೀಯ ಸಂಬಂಧ ಬಲರ್ವಧನೆ ಕುರಿತು ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಜತೆ ಚರ್ಚೆ ನಡೆಸುವರು. ಪ್ರವಾಸ ವೇಳೆ ಉದ್ಯಮಿಗಳು ಮತ್ತು ಸಿಇಒಗಳ ಜತೆಯೂ ಮೋದಿ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ಮೂರು ರಾಷ್ಟ್ರಗಳ ಪ್ರವಾಸದಲ್ಲಿ ಮೋದಿ ಅವರು 40 ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.