ನವದೆಹಲಿ: ಜಗತ್ತಿನ ಎತ್ತರದ ಯುದ್ಧಭೂಮಿ ಎಂದೇ ಕರೆಯಲಾಗುವ ಸಿಯಾಚಿನ್ನ ನೀರ್ಗಲ್ಲಿನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯು ಮಹಿಳಾ ಅಧಿಕಾರಿಯನ್ನು ನಿಯೋಜನೆ ಮಾಡಿದೆ.

ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಾರ್ಪ್ಸ್ ಆಫ್ ಎಂಜಿನಿಯರ್ಸ್ನ ಕ್ಯಾಪ್ಟನ್ ಶಿವಾ ಚೌಹಾಣ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಶಿವಾ ಚೌಹಾನ್ ನಿಯೋಜನೆ ಕುರಿತು ಟ್ವೀಟ್ ಮಾಡಿರುವ ಮೋದಿ, ‘ಇದು ಭಾರತದ ನಾರಿ ಶಕ್ತಿಯ ಚೈತನ್ಯವನ್ನು ವಿವರಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಶಿವಾ ಚೌಹಾನ್ ಅವರನ್ನು, 15,600 ಅಡಿ ಎತ್ತರದಲ್ಲಿರುವ ಕುಮಾರ್ ಪೋಸ್ಟ್ನಲ್ಲಿ ನಿಯೋಜನೆ ಮಾಡಲಾಗಿದೆ.

‘ಮೂರು ತಿಂಗಳು ಕಾಲ ಕಠಿಣ ತರಬೇತಿ ನೀಡಿದ ನಂತರ ಕ್ಯಾಪ್ಟನ್ ಚೌಹಾನ್ ಅವರನ್ನು ಸಿಯಾಚಿನ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸುವ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.

ಓದಿ... ಗುಜರಾತ್: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಪ್ರಚಾರಕ್ಕೆ ಬಜರಂಗದಳ ವಿರೋಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.