ನವದೆಹಲಿ: ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಹತ್ಯೆಯ ಯತ್ನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇದು ಹೇಡಿತನದ ಕೃತ್ಯ ಎಂದು ಖಂಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೋ ಅವರ ಮೇಲೆ ಗುಂಡಿನ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ಈ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಪ್ರಧಾನಿ ಫಿಕೊ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಲೋವಾಕಿಯಾ ಪರವಾಗಿ ಭಾರತವು ನಿಲ್ಲುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಯುರೋಪ್‌ನ ಸಣ್ಣ ದೇಶ ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಬುಧವಾರ (ಮೇ.15) ಬೆಂಬಲಿಗರ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ದಾಳಿಯಿಂದ ಫಿಕೊ ಅವರ ಹೊಟ್ಟೆಗೆ ಗಂಭೀರ ಗಾಯಗಳಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಬನ್‌ಸ್ಕಾ ಬಿಸ್ಟ್ರಿಕಾ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಶಂಕಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.