ಚೆನ್ನೈ: ತಮಿಳುನಾಡಿನಲ್ಲಿ ಚೆನ್ನೈ-ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು.

ಇದರೊಂದಿಗೆ ಈ ಎರಡು ನಗರಗಳ ನಡುವಣ ಪ್ರಯಾಣ ಅವಧಿಯೂ ಒಂದು ತಾಸಿಗೂ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು.

ಬಳಿಕ ಅವರು ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ರೈಲು ಸುಮಾರು 5 ತಾಸು 50 ನಿಮಿಷಗಳಲ್ಲಿ ಗಮ್ಯಸ್ಥಾನ ತಲುಪಲಿದೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ.

ವಂದೇ ಭಾರತ್ ರೈಲು 'ಕವಚ' ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್), ಎಲ್ಲ ಬೋಗಿಗಳಲ್ಲಿ ಸಿಸಿಟಿವಿ, ಆಟೋಮ್ಯಾಟಿಕ್ ಸ್ಲೈಡಿಂಗ್ ಡೋರ್, ಬ್ರೈಲ್ ಲಿಪಿಯಲ್ಲಿ ಸೀಟು ಸಂಖ್ಯೆ, ದಿವ್ಯಾಂಗ ಸ್ನೇಹಿ ಶೌಚಾಲಯ, ಎಲ್ಇಡಿ ಬೆಳಕು, 360 ಡಿಗ್ರಿ ತಿರುಗುವ ಆಸನ ಸೇರಿದಂತೆ ಅತ್ಯಾಧುನಿಕ ಸುರಕ್ಷಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.