ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಇಂದು 77ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

'ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.

‘ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ನ ಎಲ್ಲ ಕಾರ್ಯಕರ್ತರ ಪರವಾಗಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ’ ಎಂದು ಖರ್ಗೆ ಹೇಳಿದ್ದಾರೆ.

ದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿರುವ ಸೋನಿಯಾ ಗಾಂಧಿ, ಆರೋಗ್ಯದ ಸಮಸ್ಯೆಯಿಂದ ಕಳೆದ ಕೆಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.