ನವದೆಹಲಿ : ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿಯ ಪಕ್ಷದ ಮುಖ್ಯ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೂ ಸಭೆಯಲ್ಲಿ ಭಾಗಿಯಾಗಿದ್ದರು.

ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿ ಈ ಸಭೆ ನಡೆಯಿತು. ಆಡಳಿತದಲ್ಲಿಯ ತಮ್ಮ ಸಾಧನೆಗಳು ಮತ್ತು ಜಾರಿ ಮಾಡಿರುವ ಹಲವಾರು ಕಲ್ಯಾಣ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿಗಳು ಸಭೆಯಲ್ಲಿ ಮಾಹಿತಿ ಹಂಚಿಕೊಂಡರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಸಭೆಯಲ್ಲಿ ಹಾಜರಿದ್ದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಅವರು ಕೂಡಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.