ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪಂನಲ್ಲಿ 'ಇಂಟರ್ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್- ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿಯ (ITU-WTSA) 8ನೇ ಆವೃತ್ತಿಯನ್ನು ಇಂದು (ಮಂಗಳವಾರ) ಉದ್ಘಾಟಿಸಿದರು.

ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದೇ ಮೊದಲ ಬಾರಿಗೆ ITU-WTSA ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದಲ್ಲದೇ 'The future is now' ಎಂಬ ಥೀಮ್ ಹೊಂದಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ನ (IMC) 8ನೇ ಆವೃತ್ತಿಯನ್ನೂ ಪ್ರಧಾನಿ ಉದ್ಘಾಟಿಸಿದರು.

'ಅಕ್ಟೋಬರ್ 15 ರಂದು 'ಇಂಟರ್ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್ - ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿ ಮತ್ತು ಇಂಡಿಯಾ ಮೊಬೈಲ್ ಕಾಂಗ್ರೆಸ್ 2024 ಅನ್ನು ಉದ್ಘಾಟಿಸಲಾಗುವುದು. ಈ ಕಾರ್ಯಕ್ರಮಗಳು ಪ್ರಮುಖವಾಗಿದ್ದು, ವಲಯದ ಪ್ರಮುಖ ಪಾಲುದಾರರನ್ನು ಒಟ್ಟುಗೂಡಿಸುತ್ತವೆ' ಎಂದು ಪ್ರಧಾನಿ ಎಕ್ಸ್ನಲ್ಲಿ ಸೋಮವಾರ ಪೋಸ್ಟ್ ಮಾಡಿದ್ದರು.

ಇಂಡಿಯಾ ಮೊಬೈಲ್ ಕಾಂಗ್ರೆಸ್, ಟೆಲಿಕಾಂ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುವ 190ಕ್ಕೂ ಹೆಚ್ಚು ದೇಶಗಳ 3,000ಕ್ಕೂ ಹೆಚ್ಚು ಉದ್ಯಮ ನಾಯಕರು ಮತ್ತು ಟೆಕ್ ತಜ್ಞರನ್ನು ಒಟ್ಟುಗೂಡಿಸುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.

20 ದೇಶಗಳ ಭಾಗವಹಿಸುವಿಕೆಯೊಂದಿಗೆ 400ಕ್ಕೂ ಹೆಚ್ಚು ಪ್ರದರ್ಶಕರು, 900 ಸ್ಟಾರ್ಟ್ಅಪ್ಗಳನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.