ಬುಲಂದ್‌ಶಹರ್ (ಯುಪಿ): ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ₹19,100 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಸರಕು ಸಾಗಣೆ ಕಾರಿಡಾರ್‌ನ ನ್ಯೂ ಖುರ್ಜಾ ಹಾಗೂ ನ್ಯೂ ರೆವಾರಿ ನಡುವಿನ ವಿದ್ಯುದ್ದೀಕರಣಗೊಂಡ 173 ಕಿ.ಮೀ ಉದ್ದದ ದ್ವಿಪಥ ಮಾರ್ಗವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಸರಕು ರೈಲಿಗೆ ಪ್ರಧಾನಿ ಹಸಿರು ನಿಶಾನೆ ತೋರಿಸಿದರು.

ಮಥುರಾ–ಪಲ್ವಾಲ್ ವಿಭಾಗ ಮತ್ತು ಚಿಪಿಯಾನ ಬುಜುರ್ಗ್– ದಾದ್ರಿ ವಿಭಾಗವನ್ನು ಸಂಪರ್ಕಿಸುವ ರೈಲು ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅನೇಕ ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದ ಅವರು, ಇಂಡಿಯನ್ ಆಯಿಲ್‌ನ ತುಂಡ್ಲಾ–ಗವಾರಿಯಾ ಪೈಪ್‌ಲೈನ್ ಅನ್ನು ಉದ್ಘಾಟಿಸಿದರು. ಸುಮಾರು 255 ಕಿ.ಮೀ ಉದ್ದದ ಪೈಪ್‌ಲೈನ್ ಇದಾಗಿದ್ದು, ₹700 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಸುಮಾರು ₹460 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಒಳಚರಂಡಿ ಸಂಸ್ಕರಣಾ ಘಟಕ ಸೇರಿದಂತೆ ನವೀಕರಿಸಿದ ಮಥುರಾ ಒಳಚರಂಡಿ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮನ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.