ನವದೆಹಲಿ: ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟಕ್ಕೆ ತನ್ನನ್ನು ಸೇರಿಸಿಕೊಳ್ಳಬೇಡಿ ಎಂದು ಮನವಿ ಸಲ್ಲಿಸಿದ್ದ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಮನವೊಲಿಸುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.

ಬುಧವಾರ ಸಂಜೆ ಜೇಟ್ಲಿ ಅವರ ಅಧಿಕೃತ ನಿವಾಸಕ್ಕೆ ತೆರಳಿದ ಮೋದಿ, ಸುಮಾರು ಅರ್ಧಗಂಟೆ ಕಾಲ ಮಾತುಕತೆ ನಡೆಸಿ, ತಮ್ಮ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಜೇಟ್ಲಿ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಅರುಣ್ ಜೇಟ್ಲಿ ಇರಲ್ಲ

ಮೋದಿಗೆ ಬುಧವಾರ ಪತ್ರ ಬರೆದಿದ್ದ ಜೇಟ್ಲಿ, ‘ನಾನು ಹಲವು ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದೇನೆ. ಇದರಿಂದ ಚೇತರಿಸಿಕೊಳ್ಳಲು ತುಂಬಾ ಸಮಯ ಬೇಕಾಗಬಹುದು. ಆದ್ದರಿಂದ ಹೊಸ ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ನಿರ್ವಹಿಸಲು ನನ್ನಿಂದ ಸಾಧ್ಯವಾಗಲಾರದು. ಆದರೆ ಸರ್ಕಾರ ಅಥವಾ ಪಕ್ಷಕ್ಕೆ ಅಗತ್ಯವೆನಿಸಿದರೆ ಅನೌಪಚಾರಿಕವಾಗಿ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ಧ’ ಎಂದಿದ್ದರು. ಈ ಪತ್ರದ ಪ್ರತಿಯನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಮೋದಿ ಪ್ರಮಾಣ ವಚನ ಇಂದು

ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದ ಜೇಟ್ಲಿ ಅನಾರೋಗ್ಯದಿಂದಾಗಿ ಕೊನೆಯ ಬಜೆಟ್ ಮಂಡಿಸಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.