ಅಹ್ಮದನಗರ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಮಹಾರಾಷ್ಟ್ರದ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಉಪಸ್ಥಿತರಿದ್ದರು.

ಇದೇ ದೇವಸ್ಥಾನದಲ್ಲಿ ಪ್ರಧಾನ ಮಂತ್ರಿಯವರು ನೂತನ 'ದರ್ಶನ ಕ್ಯೂ' ಕಾಂಪ್ಲೆಕ್ಸ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ನೀಲವಂಡೆ ಅಣೆಕಟ್ಟೆಗೆ ಜಲಪೂಜೆ ನೆರವೇರಿಸಿ ಅದನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಇದೇ ವೇಳೆ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ, ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲ ಕ್ಷೇತ್ರ ಸೇರಿದಂತೆ ಸುಮಾರು ₹7,500 ಕೋಟಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
.ಮಹಾರಾಷ್ಟ್ರ: ₹7,500 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.