ನವದೆಹಲಿ: ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಇದೇ ವೇಳೆ 2000ರಲ್ಲಿ ಮುಂಡಾ ಅವರ ಜನ್ಮಶತಮಾನೋತ್ಸವದ ನೆನಪಿನಲ್ಲಿ ರೂಪುಗೊಂಡ ಜಾರ್ಖಂಡ್ ರಾಜ್ಯದ ನಿವಾಸಿಗಳಿಗೆ ಪ್ರಧಾನಿ ಶುಭಾಶಯ ಕೋರಿದರು.

ಜಾರ್ಖಂಡ್ ರಾಜ್ಯ ಐತಿಹಾಸಿಕವಾಗಿ ಮತ್ತು ವಿಶಿಷ್ಟ ಸಂಸ್ಕೃತಿಯಿಂದ ಗುರುತಿಸಿಕೊಂಡಿದೆ ಎಂದು ಬಣ್ಣಿಸಿದ ಪ್ರಧಾನಿ, ’ಭಗವಾನ್ ಬಿರ್ಸಾ ಮುಂಡಾ ಅವರು ಜನಿಸಿದ ಈ ನೆಲದಲ್ಲಿ ಅಭಿವೃದ್ಧಿ ಕಾರ್ಯಗಳು ಮುನ್ನಡೆಯಲಿ‘ ಎಂದು ಅವರು ಹಾರೈಸಿದರು.

’ಬುಡಕಟ್ಟು ಜನಾಂಗದವರ ಹಕ್ಕುಗಳ ರಕ್ಷಣೆಗೆ ಹೋರಾಟ ನಡೆಸಿದ್ದ ಮುಂಡಾ ಅವರು ಸಮುದಾಯದವರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅಣಿಗೊಳಿಸಲು ಶ್ರಮಿಸಿದ್ದರು. ಇಂಥ ಮಹಾನ್ ನಾಯಕರು ದೇಶಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ’ ಮೋದಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಬಿರ್ಸಾ ಮುಂಡಾ ಅವರ ಜನ್ಮ ದಿನವನ್ನು ’ಜನ್‌ಜಾತೀಯ ಗೌರವ ದಿವಸ’ವನ್ನಾಗಿ (ಬುಡಕಟ್ಟು ದಿವಸ) ಆಚರಿಸುವುದಾಗಿ ಪ್ರಕಟಿಸಿದೆ. ಅವಿಭಜಿತ ಬಿಹಾರದ ಬುಡಕಟ್ಟು ಪ್ರದೇಶದಲ್ಲಿ 1875 ರಲ್ಲಿ ಜನಿಸಿದ ಬಿರ್ಸಾ ಮುಂಡಾ, ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆ ಮತ್ತು ಮತಾಂತರ ಚಟುವಟಿಕೆಗಳ ವಿರುದ್ಧ ಹೋರಾಟಕ್ಕೆ ಆದಿವಾಸಿಗಳನ್ನು ಒಟ್ಟುಗೂಡಿಸಿದ್ದರು. 1900 ರಲ್ಲಿ ರಾಂಚಿ ಜೈಲಿನಲ್ಲಿ ಅವರು ನಿಧನರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.