ನವದೆಹಲಿ: ಇಂದು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮದಿನ. ಧೀಮಂತ ದಲಿತ ನಾಯಕನ ಸಾಮಾಜಿಕ ಸೇವೆಯನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸಾಮಾಜಿಕ ಸೇವೆಗೆ ಅವರ ಸಮರ್ಪಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರ ಬದ್ಧತೆಯು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ' ಎಂದಿದ್ದಾರೆ. ಅಲ್ಲದೇ ಹಿಂದಿನ ವಿಡಿಯೊ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ.

ಬಿಹಾರ ಮೂಲದ ಜಗಜೀವನ್ ರಾಮ್ 1977 ರಿಂದ 1979 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ತುರ್ತು ಪರಿಸ್ಥಿತಿ ವಿರೋಧಿಸಿದ್ದ ಅವರು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಳಿಕ ಜನತಾ ಪಕ್ಷದ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿದ್ದರು.
.ಬಾಬು ಜಗಜೀವನ್ ರಾಮ್ ಆದರ್ಶ ಪಾಲಿಸಿ: ಬಿ. ಸದಾಶಿವ ಪ್ರಭು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.