ನವದೆಹಲಿ: ‘ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ಗೆ ತೆರಳಿದ್ದ ವೇಳೆ ಭದ್ರತಾ ಲೋಪವಾಗಿದ್ದಕ್ಕೆ ಪಂಜಾಬ್ ಪೊಲೀಸರು ಕಾರಣ’ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಆರೋಪಿಸಿದ್ದಾರೆ.

‘ಪ್ರತಿಭಟನಾಕಾರರ ಬಗ್ಗೆ ಪಂಜಾಬ್ ಪೊಲೀಸರಿಗೆ ಗುಪ್ತಚರ ಮಾಹಿತಿ ಇದ್ದರೂ ಎಸ್ಪಿಜಿಯ ಬ್ಲೂ ಬುಕ್ ಮಾರ್ಗದರ್ಶನಗಳನ್ನು ಅನುಸರಿಸಲಿಲ್ಲ. ಪ್ರಧಾನಿಯವರಿಗೆ ಪರ್ಯಾಯ ಮಾರ್ಗವನ್ನು ಹುಡಕಲಿಲ್ಲ’ ಎಂದು ಅಧಿಕಾರಿಗಳು ಆರೋಪಿಸಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟಿಸಿದೆ.

‘ನಮ್ಮ ಗುಪ್ತಚರ ಅಧಿಕಾರಿಗಳು ಪಂಜಾಬ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದರು. ಪ್ರತಿಭಟನಾಕಾರರ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಪ್ರಧಾನಿ ಭೇಟಿ ವೇಳೆ ಭದ್ರತಾ ಲೋಪ ಆಗುವುದಿಲ್ಲವೆಂದು ಪಂಜಾಬ್ ಪೊಲೀಸರು ನಮಗೆ ಭರವಸೆ ಕೊಟ್ಟಿದ್ದರು’ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಪಂಜಾಬ್ ಪೊಲೀಸರು ಕೈಗೊಂಡಿದ್ದ ಭದ್ರತಾ ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಬುಧವಾರ ಜನವರಿ 5ರಂದು ಪಂಜಾಬ್ನ ಫಿರೋಜ್ಪುರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಿಗದಿಯಾಗಿತ್ತು.

ಮೋದಿ ಭೇಟಿ ವಿರುದ್ಧ ಪ್ರತಿಭಟನೆ: ಪಂಜಾಬ್ ರೈತರ ಮೋದಿ ಗೋಬ್ಯಾಕ್ ಅಭಿಯಾನ

ಇನ್ನೊಂದೆಡೆ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ,‘ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅಡ್ಡಿಯಾಗಿದ್ದಕ್ಕೆ ವಿಷಾದವಿದೆ. ಆದರೆ, ಇಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ. ಪ್ರಧಾನಿ ಅವರು ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ’ ಎಂದಿದ್ದಾರೆ.

‘ಪ್ರಧಾನಿ ಅವರ ರ್ಯಾಲಿಗೆ ಭದ್ರತೆ ಕೇಳಲಾಗಿತ್ತು. ಅದಕ್ಕೆ ಅಗತ್ಯವಿದ್ದ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು. ಪ್ರಧಾನಿ ಅವರು ರಸ್ತೆ ಮಾರ್ಗದಲ್ಲಿ ಹುಸೈನಿವಾಲಾಕ್ಕೆ ಹೋಗುವ ಕಾರ್ಯಕ್ರಮ ಮೂಲಪಟ್ಟಿಯಲ್ಲಿ ಇರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಪ್ರಧಾನಿ ರಸ್ತೆ ಮಾರ್ಗದಲ್ಲಿ ಹೊರಟರು’ ಎಂದಿದ್ದಾರೆ.

‘ಪ್ರತಿಭಟನೆಯ ಕಾರಣ ರಸ್ತೆ ಬಂದ್ ಆಗಿತ್ತು. ಪ್ರತಿಭಟನಾಕಾರರನ್ನು ತೆರವು ಮಾಡಲು 20 ನಿಮಿಷವಾದರೂ ಬೇಕಿತ್ತು. ಪ್ರಧಾನಿ ಅವರಿಗೆ ಬದಲಿ ಮಾರ್ಗವನ್ನೂ ಸೂಚಿಸಿದೆವು. ಆದರೆ ಅವರು ವಾಪಸ್ಸಾಗಲು ನಿರ್ಧರಿಸಿದರು’ ಎಂದು ಚನ್ನಿ ವಿವರಣೆ ನೀಡಿದ್ದಾರೆ.

ಭದ್ರತಾ ಲೋಪ: ಪಂಜಾಬ್ನ ಫ್ಲೈಓವರ್ನಲ್ಲಿ 20 ನಿಮಿಷ ಸಿಲುಕಿದ ಪ್ರಧಾನಿ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.