ಮುಂಬೈ/ ನಾಸಿಕ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ₹17,840 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಶೇವಾ ‘ಅಟಲ್ ಸೇತು‘ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೇಶಕ್ಕೆ ಸಮರ್ಪಿಸಲಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಶಿಂಧೆ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.

ಮೋದಿ ಅವರು 2016ರ ಡಿಸೆಂಬರ್ ತಿಂಗಳಿನಲ್ಲಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ.

ಅಟಲ್ ಸೇತು ಸುಮಾರು 21.8 ಕಿಮೀ ಉದ್ದದ ಆರು-ಪಥದ ಸೇತುವೆಯಾಗಿದ್ದು, 16.5 ಕಿಮೀ ಸಮುದ್ರದ ಮೇಲೆ ಹಾಗೂ 5.5 ಕಿಮೀ ಭೂಮಿಯ ಮೇಲೆ ನಿರ್ಮಿಸಲಾಗಿದೆ.

ಇದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ. ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಪ್ರಯಾಣದ ಸಮಯವನ್ನು ತಗ್ಗಿಸುತ್ತದೆ. ಜತೆಗೆ ಮುಂಬೈ ಬಂದರು ಮತ್ತು ಜವಾಹರಲಾಲ್ ನೆಹರು ಬಂದರು ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಹೇಳಿಕೆಯೊಂದು ತಿಳಿಸಿದೆ.

ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ಉದ್ಘಾಟನೆ:

ಸೇತುವೆ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ನಾಸಿಕ್ನಲ್ಲಿ 27ನೇ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಮಹಾರಾಷ್ಟ್ರದಲ್ಲಿ ₹30,500 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬಳಿಕ ಪ್ರಧಾನಿ ನವಿ ಮುಂಬೈನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈಸ್ಟರ್ನ್ ಫ್ರೀವೇ ಆರೆಂಜ್ ಗೇಟ್ನಿಂದ ಮರೈನ್ ಡ್ರೈವ್ಗೆ ಸಂಪರ್ಕಿಸುವ ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನಂತರ ಸೂರ್ಯ ಪ್ರಾದೇಶಿಕ ಬೃಹತ್ ಕುಡಿಯುವ ನೀರಿನ ಯೋಜನೆಯ 1ನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದನ್ನು ₹1,975 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, ಇದು ಮಹಾರಾಷ್ಟ್ರದ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುತ್ತದೆ. ಸುಮಾರು 14 ಲಕ್ಷ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ.
.ಸ್ವಾಮಿ ವಿವೇಕಾನಂದರ ಜನ್ಮದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ನಮನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.