ನವದೆಹಲಿ: ಹಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟಕ್ಕೆ ನಿನ್ನೆ (ಅ.08) ಅದ್ಧೂರಿ ತೆರೆಬಿದ್ದಿದ್ದೆ. ಕ್ರೀಡಾಕೂಟದಲ್ಲಿ ಈ ಬಾರಿ ಭಾರತ ವಿವಿಧ ಕ್ರೀಡೆಗಳಲ್ಲಿ ಬರೋಬ್ಬರಿ 107 ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.

ದೇಶಕ್ಕೆ ಹೆಮ್ಮೆ ತಂದ ಕ್ರೀಡಾ ಸಾಧಕರನ್ನು ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಅ.10) ಮೇಜರ್ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ಭೇಟಿ ಮಾಡಲಿದ್ದು ಅವರೊಂದಿಗೆ ಸಂವಾದ ನಡೆಸಲಿದ್ದಾರೆ.

ಕ್ರೀಡಾಪಟುಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಲಿದ್ದು ಬಳಿಕ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಭಾರತ 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚು ಸೇರಿದಂತೆ ಒಟ್ಟು 107 ಪದಕಗಳನ್ನು ಜಯಿಸಿದೆ.

ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮಾತ್ರವಲ್ಲದೆ ಅವರ ತರಬೇತುದಾರರು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಪದಾಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.