ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 8 ರಿಂದ 10ರವರೆಗೆ ರಷ್ಯಾ ಹಾಗೂ ಆಸ್ಟ್ರಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.

22ನೇ ಭಾರತ- ರಷ್ಯಾ ವಾರ್ಷಿಕ ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಜುಲೈ 8 ರಿಂದ 9ರವರೆಗೆ ರಷ್ಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

5 ವರ್ಷಗಳ ನಂತರ ಮೋದಿಯವರ ಮೊದಲ ರಷ್ಯಾ ಪ್ರವಾಸ ಇದಾಗಿದೆ. 2019ರಲ್ಲಿ ಅವರು ಇಲ್ಲಿನ ವ್ಲಾಡಿವೋಸ್ಟಾಕ್‌ನಲ್ಲಿ ನಡೆದ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿದ್ದರು.

ರಷ್ಯಾ ಪ್ರವಾಸ ಮುಗಿಸಿದ ನಂತರ, ಮೋದಿ ಅವರು ಆಸ್ಟ್ರಿಯಾಕ್ಕೆ ಪ್ರಯಾಣಿಸಲಿದ್ದಾರೆ. 41 ವರ್ಷಗಳ ಬಳಿಕ ಆ ದೇಶ(ಆಸ್ಟ್ರಿಯಾ)ಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿ ಇದಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
.ಅಮೆರಿಕ, ಈಜಿಪ್ಟ್ ಪ್ರವಾಸ ಮುಗಿಸಿ ಭಾರತಕ್ಕೆ ಬಂದಿಳಿದ ಪ್ರಧಾನಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.