ರಾಂಚಿ: ಕಾರ್ಯಾಚರಣೆ ಸ್ಥಗಿತಗೊಳಿಸಿರುವ, ಮಿಗ್–211 ಯುದ್ಧವಿಮಾನವನ್ನು ಇಲ್ಲಿನ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನಾವರಣಗೊಳಿಸಿದರು.

ಈ ಯುದ್ಧವಿಮಾನವನ್ನು, ಬಾಂಗ್ಲಾದೇಶ ವಿಮೋಚನೆಗಾಗಿ 1971ರಲ್ಲಿ ನಡೆದ ಯುದ್ಧದಲ್ಲಿ ಬಳಸಲಾಗಿತ್ತು.

‘ನಿಷ್ಕ್ರಿಯಗೊಳಿಸಿರುವ ಮಿಗ್–211 ಯುದ್ಧವಿಮಾನವನ್ನು ಪ್ರಧಾನಿ ಮೋದಿ ರಾಜಭವನ ಆವರಣದಲ್ಲಿ ಅನಾವರಣಗೊಳಿಸಿದ್ದಾರೆ. ಈ ಯುದ್ಧವಿಮಾನವನ್ನು ಭಾರತೀಯ ವಾಯುಪಡೆಗೆ 1964ರಲ್ಲಿ ಸೇರ್ಪಡೆ ಮಾಡಲಾಗಿತ್ತು’ ಎಂದು ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಇದ್ದರು.

ನಮನ: ಇದಕ್ಕೂ ಮುನ್ನ, ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಹುಟ್ಟೂರು, ಖೂಂಟಿ ಜಿಲ್ಲೆಯಲ್ಲಿರುವ ಉಲಿಹಾತು ಗ್ರಾಮಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮುಂಡಾ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿನವನ್ನಾಗಿ ಆಚರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.