ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಂಚೆ ಚೀಟಿ ಮತ್ತು ₹75 ನಾಣ್ಯವನ್ನು ಬಿಡುಗಡೆ ಮಾಡಿದರು.

ನೂತನ ಸಂಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಿದರು.

ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾಣ್ಯದ ತೂಕ 34.65 ರಿಂದ 35.35 ಗ್ರಾಂ ಇರಲಿದೆ.

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಚಿತ್ರವಿದೆ. ಅದರ ಸುತ್ತಲೂ ದೇವನಾಗರಿ ಲಿಪಿಯಲ್ಲಿ "ಭಾರತ್" ಮತ್ತು ಇಂಗ್ಲಿಷ್ನಲ್ಲಿ "ಇಂಡಿಯಾ" ಎಂದು ಬರೆಯಲಾಗಿದೆ.

ಸಿಂಹದ ಲಾಂಛನದ ಕೆಳಗೆ ಅಂಕಿಗಳಲ್ಲಿ 75 ಎಂದೂ, ರೂಪಾಯಿ ಚಿಹ್ನೆ ‘₹’ಯನ್ನು ಮುದ್ರಿಸಲಾಗಿದೆ.

ನಾಣ್ಯದ ಇನ್ನೊಂದು ಬದಿಯಲ್ಲಿ ಸಂಸತ್ ಭವನದ ಚಿತ್ರ ಮತ್ತು "2023"ನೇ ಇಸವಿಯನ್ನು ಮುದ್ರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.