ಮೊರ್ಬಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತೂಗುಸೇತುವೆ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಶೋಧ ಮತ್ತು ರಕ್ಷಣಾ ಕಾರ್ಯಚರಣೆಯನ್ನು ವೀಕ್ಷಿಸಿದರು.

ಘಟನಾ ಸ್ಥಳಕ್ಕೆ ಆಗಮಿಸುವ ಮೊದಲು ಪ್ರಧಾನಿ ಮೋದಿ ಅವರು ವೈಮಾನಿಕ ವೀಕ್ಷಣೆ ಮಾಡಿದರು. ಬಳಿಕ ದರ್ಬಾರ್ಗಢ ಪ್ಯಾಲೆಸ್ ಮೂಲಕ ದುರಂತ ನಡೆದ ಸ್ಥಳಕ್ಕೆ ಆಗಮಿಸಿದರು. ಅಧಿಕಾರಿಗಳು ದುರ್ಘಟನೆಗೆ ಕಾರಣ ಏನಾಗಿರಬಹುದು ಎಂಬ ಮಾಹಿತಿ ನೀಡಿದರು. ನಂತರ ಮೊರ್ಬಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರು ಮಂದಿ ಗಾಯಾಳುಗಳನ್ನು ಭೇಟಿ ಮಾಡಿದರು.

ಸೇತುವೆಯ ಒಂದು ತುದಿ ದರ್ಬಾರ್ಗಢ ಪ್ಯಾಲೇಸ್ಅನ್ನು ಸಂಪರ್ಕಿಸಿದರೆ, ಮತ್ತೊಂದು ತುದಿ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಮಾರ್ಗವಾಗಿದೆ. ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಇದಾಗಿದೆ. ಸುಮಾರು 230 ಮೀಟರ್ ಉದ್ದದ ಈ ಸೇತುವೆಯನ್ನು 19ನೇ ಶತಮಾನದಲ್ಲಿ ನಿರ್ಮಿಸಲಾಗಿದೆ.

ಭಾನುವಾರ ಭಾರಿ ಸಂಖ್ಯೆಯ ಪ್ರವಾಸಿಗರು ಸೇತುವೆ ಮೇಲೆ ಜಮಾಯಿಸಿದ್ದರಿಂದ ಮುರಿದು ಬಿದ್ದು 135 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.