ಅಹಮದಾಬಾದ್ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (99) ಅವರು ಅನಾರೋಗ್ಯದಿಂದಾಗಿ ಇಲ್ಲಿನಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆ್ಯಂಡ್ ರೀಸರ್ಚ್ ಸೆಂಟರ್ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.

ವಿಷಯ ತಿಳಿದು ದೆಹಲಿಯಿಂದ ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದ್ದ ಮೋದಿ ಅವರು ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸುಮಾರು ಒಂದೂವರೆ ಗಂಟೆ ಅಲ್ಲೇ ಇದ್ದರು. ಅಮ್ಮನ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೂ ಆಸ್ಪತ್ರೆಗೆ ಭೇಟಿ ನೀಡಿದ್ದರು.

‘ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ’ ಎಂದು ಬಿಜೆಪಿ ಸಂಸದ ಜುಗಲ್‌ಜೀ ಠಾಕೂರ್ ಹೇಳಿದ್ದಾರೆ.

ಹೀರಾಬೆನ್ ಅವರು ಕಿರಿಯ ಮಗ ಪಂಕಜ್ ಮೋದಿ ಜೊತೆ ಗಾಂಧಿನಗರ ಬಳಿಯ ರಾಯ್‌ಸೆನ್ ಗ್ರಾಮದಲ್ಲಿ ನೆಲೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.