ನವದೆಹಲಿ: 'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮದ 104ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ-3 ಯೋಜನೆ ಯಶಸ್ಸು ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಮುಖ್ಯಾಂಶಗಳು:

ನವ ಭಾರತದ ಸ್ಫೂರ್ತಿಯ ಸಂಕೇತ:

ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಮಗದೊಮ್ಮೆ ಚಂದ್ರಯಾನ-3 ಯೋಜನೆಯ ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದು, ನವ ಭಾರತದ ಸ್ಫೂರ್ತಿಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಪರಿಸ್ಥಿತಿಯಲ್ಲೂ ಗೆಲುವು ಸಾಧಿಸುವುದು ಹೇಗೆ ಎಂಬುದು ಭಾರತಕ್ಕೆ ಗೊತ್ತಿದೆ. ಚಂದ್ರಯಾನ-3 ಸಾಧನೆ ಅತ್ಯಂತ ಮಹತ್ತರವಾಗಿದ್ದು, ಎಷ್ಟೇ ಚರ್ಚಿಸಿದರೂ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ.

ಚಂದ್ರಯಾನ ಯೋಜನೆಯಲ್ಲಿ ಮಹಿಳಾ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ಭಾಗಿಯಾಗಿದ್ದು, ಮಹಿಳಾ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ದೇಶದ ಹೆಣ್ಣುಮಗಳು ಮಹತ್ವಾಕಾಂಕ್ಷೆ ಹೊಂದಿದಾಗ ಆ ದೇಶ ಅಭಿವೃದ್ಧಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜಿ-20 ಶೃಂಗಸಭೆ ಆಯೋಜಿಸಲು ಭಾರತ ಸಂಪೂರ್ಣ ಸಜ್ಜು:

ಮುಂದಿನ ತಿಂಗಳು ಜಿ-20 ಶೃಂಗಸಭೆ ಆಯೋಜಿಸಲು ಭಾರತ ಸಂಪೂರ್ಣ ಸಜ್ಜಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸೆಪ್ಟೆಂಬರ್ ತಿಂಗಳು ಭಾರತದ ಸಾಮರ್ಥ್ಯಕ್ಕೆ ವೇದಿಕೆಯಾಗಲಿದೆ. ಈ ಶೃಂಗಸಭೆಯಲ್ಲಿ ಭಾಗವಹಿಸಲು 40ಕ್ಕೆ ಹೆಚ್ಚು ದೇಶಗಳ ಮುಖಂಡರು ಮತ್ತು ಅನೇಕ ಜಾಗತಿಕ ಸಂಸ್ಥೆಗಳ ನಾಯಕರು ದೆಹಲಿಗೆ ಬರುತ್ತಾರೆ. ಜಿ-20 ಇತಿಹಾಸದಲ್ಲೇ ಅತಿ ದೊಡ್ಡ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ.

ಯುವ ಕ್ರೀಡಾಪಟುಗಳ ಸಾಧನೆಗೆ ಮೆಚ್ಚುಗೆ...

ಚೀನಾದಲ್ಲಿ ನಡೆದ ವಿಶ್ವ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾರತದ ಯುವ ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕ್ರೀಡಾ ವಿಭಾಗದಲ್ಲಿ ಭಾರತ ನಿರಂತರವಾಗಿ ಯಶಸ್ಸನ್ನು ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.