ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 7ರಿಂದ 11 ರವರೆಗೆ ಜಿ20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ‘ಜಿ20 ಇಂಡಿಯಾ’ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಜಿ20 ಶೃಂಗಸಭೆಗೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆ್ಯಪ್ ಬಿಡುಗಡೆಗೆ ಸಂಬಂಧಿಸಿ ಸಚಿವರು ಮತ್ತು ಅಧಿಕಾರಿಗಳು ಸಲಹೆ ನೀಡಿದ್ದರು. ಶೃಂಗಸಭೆಯಲ್ಲಿ ಭಾಗವಹಿಸಲಿರುವ ವಿದೇಶಿ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಲು ಆ್ಯಪ್ ಸಹಾಯವಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಭಾರತದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು 'ಜಿ20 ಇಂಡಿಯಾ' ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಅಪ್ಲಿಕೇಶನ್ ಬಳಕೆದಾರರಿಗೆ ಶೃಂಗಸಭೆಗೆ ಸಂಬಂಧಿತ ಸಮಗ್ರ ಮಾಹಿತಿ ಒದಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.