ನವದೆಹಲಿ: ದೇಶದ ಜನ ಅಕ್ಟೋಬರ್ 1ರಂದು ಸ್ವಚ್ಛತೆಗಾಗಿ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕರೆ ನೀಡಿದ್ದಾರೆ.

‘ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ, ನಾವು ಒಂದು ಪ್ರಮುಖ ಸ್ವಚ್ಛತೆಯ ಅಭಿಯಾನಕ್ಕಾಗಿ ಒಗ್ಗೂಡುತ್ತೇವೆ. ಸ್ವಚ್ಛ ಭಾರತ್ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಚ್ಛ ಭವಿಷ್ಯವನ್ನು ರೂಪಿಸಲು ಈ ಉದಾತ್ತ ಪ್ರಯತ್ನಕ್ಕೆ ಕೈಜೋಡಿಸಿ’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಸ್ವಚ್ಛತೆಗಾಗಿ ದೊಡ್ಡ ಕಾರ್ಯಕ್ರಮವೊಂದು ಭಾನುವಾರ (ಅ.1ರಂದು) ನಡೆಯಲಿದೆ. ನೀವು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ನೀವು ನಿಮ್ಮ ಬೀದಿಗಳಲ್ಲಿ, ನೆರೆಹೊರೆಯಲ್ಲಿ, ಉದ್ಯಾನದಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಇದರಲ್ಲಿ ಭಾಗಿಯಾಗಬಹುದು’ ಎಂದು ಹೇಳಿದ್ದರು.

ಗಾಂಧಿ ಜಯಂತಿ ಸಂದರ್ಭದಲ್ಲಿ ಜನ ಖಾದಿ ಉತ್ಪನ್ನಗಳನ್ನು ಖರೀದಿಸಬೇಕು ಎಂದೂ ಮೋದಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.