ನವದೆಹಲಿ: ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಘೋಷಣೆ ಮಾಡಿರುವ ಯೋಜನೆಗಳ ಅನುಷ್ಠಾನ ಸಂಬಂಧ ಸಿದ್ಧತೆಗಳ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಸಭೆ ನಡೆಸಿದರು.

ಬಡ ಹಾಗೂ ಮಧ್ಯಮ ವರ್ಗದವರಿಗೆ ಮನೆ ನಿರ್ಮಾಣಕ್ಕೆ ಸುಲಭವಾಗಿ ಸಾಲ ಸಿಗುವಂತವಾಗುವುದನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಅಲ್ಲದೆ ಮನೆಗಳಲ್ಲಿ ಸೋಲಾರ್ ಬಳಕೆಯನ್ನು ಖಾತರಿಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಯೋಜನೆಗಳ ಅನುಷ್ಠಾನದ ಸಿದ್ಧತೆಗಳನ್ನು ಪ್ರಧಾನಿ ಪರಿಶೀಲಿಸಿದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಧಾನಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ ಹಾಗೂ ಸಂಸದೀಯ ಕಾರ್ಯದರ್ಶಿ ರಾಜೀವ್ ಗುಬಾ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಯೋಜನೆಯ ಅನುಷ್ಠಾನಕ್ಕೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.