ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಝ್ ಷರೀಫ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತವು ಶಾಂತಿ, ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ಅಭಿವೃದ್ಧಿ ಸವಾಲುಗಳತ್ತ ಕೇಂದ್ರೀಕರಿಸಬಹುದು. ಅಲ್ಲದೆ ಜನರ ಯೋಗಕ್ಷೇಮ, ಸಮೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಬಹುದು’ ಎಂದಿದ್ದಾರೆ.

‘ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಬಯಸುತ್ತೇವೆ. ಆದರೆ, ಕಾಶ್ಮೀರ ವಿವಾದವನ್ನು ಪರಿಹರಿಸುವವರೆಗೆ ಶಾಂತಿ ಸಾಧ್ಯವಿಲ್ಲ’ ಎಂದು ಶಾಹಬಾಝ್ ಷರೀಫ್ ಹೇಳಿದ ಬೆನ್ನಲ್ಲೇ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಶ್ಮೀರದ ಜನರಿಗೆ ನೈತಿಕ ಬೆಂಬಲ ನೀಡುತ್ತೇವೆ. ಕಾಶ್ಮೀರದ ಜನರಿಗಾಗಿ ಪ್ರತಿ ವೇದಿಕೆಯಲ್ಲಿ ಧ್ವನಿ ಎತ್ತುತ್ತೇವೆ, ರಾಜತಾಂತ್ರಿಕ ಬೆಂಬಲವನ್ನು ನೀಡಲಾಗುವುದು’ ಎಂದು ಹೇಳಿದ್ದಾರೆ.

ಶಾಹಬಾಝ್ ಷರೀಫ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.