ಐಜ್ವಾಲ್: ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್ನಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ನೆರೆಯ ಮಣಿಪುರ ಈಗ ಏಕೀಕೃತ ರಾಜ್ಯವಾಗಿ ಉಳಿದಿಲ್ಲ. ಜನಾಂಗೀಯ ರೇಖೆಗಳ ಮೇಲೆ ಎರಡು ರಾಜ್ಯಗಳಾಗಿ ವಿಂಗಡಿಸಲಾಗಿದೆ‘ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರವು ಇಸ್ರೇಲ್ನಲ್ಲಿ (ಇಸ್ರೇಲ್–ಹಮಾಸ್ ಸಂಘರ್ಷ) ಏನು ನಡೆಯುತ್ತಿದೆ ಎಂಬುದು ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದಾರೆ. ಆದರೆ, ಮಣಿಪುರದಲ್ಲಿ ಜನರು ಹತ್ಯೆಗೀಡಾದರು, ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದರು ಏನಾಗುತ್ತಿದೆ ಎಂಬುದರ ಬಗ್ಗೆ ಅವರಿಗೆ ಆಸಕ್ತಿಯಿಲ್ಲ’ ಎಂದು ರಾಹುಲ್ ಆರೋಪಿಸಿದರು.

‘ಬಿಜೆಪಿಯು (ಗರು) ವಿವಿಧ ಸಮುದಾಯಗಳು, ಧರ್ಮಗಳು ಮತ್ತು ಭಾಷೆಗಳ ಮೇಲೆ ದಾಳಿ ನಡೆಸುತ್ತಾರೆ. ಅಲ್ಲದೆ, ತಮ್ಮ ದುರಹಂಕಾರ, ತಿಳುವಳಿಕೆಯ ಕೊರತೆಯಿಂದಾಗಿ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಾರೆ. ಇದು ಭಾರತದ ಕಲ್ಪನೆಗೆ ಸಂಪೂರ್ಣ ವಿರುದ್ಧವಾಗಿದೆ’ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7 ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.