ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಗಿಲ್ ವಿಜಯ ದಿವಸ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

Published 26 ಜುಲೈ 2024, 5:14 IST
Last Updated 26 ಜುಲೈ 2024, 5:14 IST
ಅಕ್ಷರ ಗಾತ್ರ

ಡ್ರಾಸ್ (ಕಾರ್ಗಿಲ್): ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.

ಕಾರ್ಗಿಲ್ ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

ಕಾರ್ಗಿಲ್ ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

(ಪಿಟಿಐ ಚಿತ್ರ) 

ಡ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ, ರಾಷ್ಟ್ರದ ಸೇವೆಗಾಗಿ ಪ್ರಾಣ ತ್ಯಾಗ ಮಾಡಿದ ಸಶಸ್ತ್ರ ಪಡೆಗಳ ಅಧಿಕಾರಿಗಳು ಮತ್ತು ಸೈನಿಕರಿಗೆ ಗೌರವ ಸಲ್ಲಿಸಿದರು.

ಕಾರ್ಗಿಲ್ ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

ಕಾರ್ಗಿಲ್ ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

(ಪಿಟಿಐ ಚಿತ್ರ) 

ಲಡಾಖ್‌ನ ಕಾರ್ಗಿಲ್‌ನಲ್ಲಿ ಸುಮಾರು ಮೂರು ತಿಂಗಳ ಕಾಲ ನಡೆದ ಯುದ್ಧವು 1999ರ ಜುಲೈ 26ರಂದು ಅಧಿಕೃತವಾಗಿ ಕೊನೆಗೊಂಡಿತು. ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ವಿಜಯ ಸಾಧಿಸಿದ ಸ್ಮರಣಾರ್ಥ ಈ ದಿನವನ್ನು 'ಕಾರ್ಗಿಲ್ ವಿಜಯ ದಿವಸ' ಎಂದು ಆಚರಿಸಲಾಗುತ್ತದೆ.

ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ ಯೋಜನೆಗೆ ಚಾಲನೆ:

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಖ್​ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಹಿಮಾಚಲ ಪ್ರದೇಶ ಮತ್ತು ಲಡಾಖ್ ನಡುವೆ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿರುವ 'ಶಿಂಕುನ್ ಲಾ' ಸುರಂಗ ನಿರ್ಮಾಣಕ್ಕೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಲಡಾಖ್​ನ ನಿಮು-ಪಡುಮ್-ದರ್ಚಾ ರಸ್ತೆಯಲ್ಲಿ ನಿರ್ಮಾಣವಾಗಲಿರುವ 4.1 ಕಿ.ಮೀ ಉದ್ದದ ಈ ಸುರಂಗ ಸಮುದ್ರ ಮಟ್ಟದಿಂದ 15,800 ಅಡಿ ಎತ್ತರದಲ್ಲಿದೆ. ಇದು ಹಿಮಾಚಲ ಪ್ರದೇಶದ ಲಾಹೌಲ್ ಕಣಿವೆಯನ್ನು ಲಡಾಖ್‌ನ ಝನ್ಸ್ಕರ್ ಕಣಿವೆ ಸಂಪರ್ಕಿಸುತ್ತದೆ.

ಈ ಯೋಜನೆ ಪೂರ್ಣಗೊಂಡರೆ, ವಿಶ್ವದ ಅತಿ ಎತ್ತರದ ಸುರಂಗವಾಗಲಿದೆ. ಮಿಲಿಟರಿ ಪಡೆ ಕ್ಷಿಪ್ರವಾಗಿ ತೆರಳಲು ಮತ್ತು ಲಡಾಖ್‌ನಲ್ಲಿ ಆರ್ಥಿಕ ಅಭಿವೃದ್ಧಿಗೆ ಈ ಯೋಜನೆ ಪೂರಕವಾಗಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT