ನವದೆಹಲಿ: ಶಾಲಾ ಮಕ್ಕಳು ಅತಿಯಾಗಿ ತಂತ್ರಜ್ಞಾನಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸುವುದಕ್ಕಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ಒಳಗೊಂಡಿರುವ ಹೈಬ್ರಿಡ್ ಮಾದರಿಯ ಕಲಿಕೆಗೆ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಪರಾಮರ್ಶೆಗಾಗಿ ಶನಿವಾರ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಶಿಕ್ಷಣದ ಲಭ್ಯತೆ, ಸಮಾನತೆ, ಒಳಗೊಳ್ಳುವಿಕೆ ಮತ್ತು ಗುಣಮಟ್ಟದ ಉದ್ದೇಶದೊಂದಿಗೆ ಈ ನೀತಿಯನ್ನು ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎಲ್ಪಿಜಿ ಸಿಲಿಂಡರ್ ದರ ₹1002

ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳ ಕುರಿತ ದತ್ತಾಂಶಗಳು ಅವರು ಶಾಲೆಗೆ ದಾಖಲಾಗುತ್ತಿದ್ದಂತೆ ಅಲ್ಲಿಯೂ ಲಭ್ಯವಾಗುವಂತೆ ಸಂಯೋಜಿಸಿರಬೇಕು ಎಂದು ಮೋದಿ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ಪರಿಕಲ್ಪನಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಆಟಿಕೆಗಳ ಬಳಕೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದ್ದಾರೆ. ವಿಜ್ಞಾನ ಪ್ರಯೋಗಾಲಯಗಳನ್ನು ಹೊಂದಿರುವ ಸೆಕೆಂಡರಿ ಸ್ಕೂಲ್‌ಗಳು ಆಯಾ ಪ್ರದೇಶದ ರೈತರೊಂದಿಗೆ ತೊಡಗಿಸಿಕೊಂಡು ಮಣ್ಣು ಪರೀಕ್ಷೆ ನಡೆಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ದೇಶದಲ್ಲಿ ಪಾಕಿಸ್ತಾನದ ಏಜೆಂಟ್ಗಳು ಸಕ್ರಿಯ: ನಾರಾಯಣಸ್ವಾಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.