ನವದೆಹಲಿ: ದೇಶದ ಆಯುಷ್ ಉತ್ಪನ್ನಗಳ ಗುಣಮಟ್ಟ ದೃಢೀಕರಿಸುವುದಕ್ಕಾಗಿ ಶೀಘ್ರದಲ್ಲೇ ‘ಆಯುಷ್ ಮಾರ್ಕ್’ ಆರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಶೃಂಗಸಭೆಯ ಉದ್ಘಾಟನೆ ಬಳಿಕ ಅವರು ಮಾತನಾಡಿದರು.

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಪಾರಂಪರಿಕ ಔಷಧ ಪದ್ಧತಿ ಸಹಕಾರಿ: ಗೆಬ್ರೆಯಸಸ್

ಆಯುಷ್ ಉತ್ಪನ್ನಗಳ ಗುಣಮಟ್ಟಕ್ಕೆ ಕಾರಣವಾಗುವ ಸಾಂಪ್ರದಾಯಿಕ ಔಷಧ ಉತ್ಪನ್ನಗಳನ್ನು ಗುರುತಿಸಿ ದೃಢೀಕರಿಸಲಾಗುವುದು. ಸಾಂಪ್ರದಾಯಿಕ ಚಿಕಿತ್ಸೆಗಳಿಗಾಗಿ ಭಾರತಕ್ಕೆ ಬರುವವರಿಗಾಗಿ ‘ಆಯುಷ್ ವೀಸಾ’ ಕೆಟಗರಿಯನ್ನೂ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಟೆಡ್ರೋಸ್ ಅಧಾನೊಮ್ ಗೆಬ್ರೆಯಸಸ್, ಮಾರಿಷಸ್ ಪ್ರಧಾನಿ ಪ್ರವಿಂದ್ ಜಗನ್ನಾಥ್ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.