ನವದೆಹಲಿ: ಉತ್ತರ ಪ್ರದೇಶ, ರಾಜಸ್ಥಾನ, ಛತ್ತೀಸಗಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಾತುಕತೆ ನಡೆಸಿ, ಆಯಾ ರಾಜ್ಯಗಳಲ್ಲಿನ ಕೋವಿಡ್–19 ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 3.11 ಲಕ್ಷ ಪ್ರಕರಣಗಳು ವರದಿಯಾಗಿವೆ. 25 ದಿನಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದು ದಿನದಲ್ಲಿ ಅತಿ ಕಡಿಮೆ ಪ್ರಕರಣಗಳು ವರದಿಯಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ– ಬ್ಲ್ಯಾಕ್ ಫಂಗಸ್: ತಜ್ಞರ ಸಮಿತಿ ರಚನೆ –ಆರೋಗ್ಯ ಸಚಿವ ಸುಧಾಕರ್

ಕಳೆದ 24 ಗಂಟೆಗಳಲ್ಲಿ 4,077 ಜನರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2,70,284ಕ್ಕೇರಿದೆ ಎಂದೂ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.