ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಜತೆ ಸೋಮವಾರ ರಾತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಪ್ರಮುಖ ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ.

ಕೋವಿಡ್–19 ಸಾಂಕ್ರಾಮಿಕ, ಆರ್ಥಿಕತೆ, ಹವಾಮಾನ ಬದಲಾವಣೆ ವಿಚಾರದಲ್ಲಿ ಜತೆಯಾಗಿ ಕೆಲಸ ಮಾಡುವುದು, ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಸ್ಥಾಪನೆ ಮಾಡುವ ವಿಚಾರದಲ್ಲಿ ಇಬ್ಬರೂ ನಾಯಕರು ಬದ್ಧತೆ ಪ್ರದರ್ಶಿಸಿದ್ದಾರೆ.

ಕಳೆದ ತಿಂಗಳು ಬೈಡನ್ ಅವರು ಅಮೆರಿಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದರು.

ಓದಿ:ಹೋರಾಟದ ಹಿಂದೆ ರಾಜಕೀಯ: ನರೇಂದ್ರ ಮೋದಿ

ಮಾತುಕತೆ ಕುರಿತು ಸೋಮವಾರ ರಾತ್ರಿ ಟ್ವೀಟ್ ಮಾಡಿರುವ ಮೋದಿ, ‘ಅಮೆರಿಕದ ನೂತನ ಅಧ್ಯಕ್ಷರಿಗೆ ಶುಭ ಕೋರಿದ್ದೇನೆ. ಪ್ರಾದೇಶಿಕ ಸಮಸ್ಯೆಗಳ ಹಾಗೂ ಆದ್ಯತೆಯ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹವಾಮಾನ ಬದಲಾವಣೆಗೆ ಸಂಬಂಧಿಸಿ ಇನ್ನಷ್ಟು ಸಹಕಾರ ನೀಡಲು ಸಮ್ಮತಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.

‘ಅಧ್ಯಕ್ಷ ಬೈಡನ್ ಅವರು ಮತ್ತು ನಾನು ನಿಯಮಾಧಾರಿತ ಕಾರ್ಯಗಳಿಗೆ ಬದ್ಧರಾಗಿದ್ದೇವೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮತ್ತು ಅದರಾಚೆಗೆ ಶಾಂತಿ ಮತ್ತು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು ನಮ್ಮ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸಲು ನಾವು ಎದುರು ನೋಡುತ್ತಿದ್ದೇವೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.