ಕೇವಡಿಯಾ (ಗುಜರಾತ್):ದೇಶಕ್ಕೆ ದ್ರೋಹ ಎಸಗಿ ಪರಾರಿಯಾಗುವವರಿಗೆ ಜಗತ್ತಿನ ಎಲ್ಲಿಯೂ ನೆಲೆ ಸಿಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಜಾಗೃತ ಆಯೋಗ (ಸಿವಿಸಿ) ಮತ್ತು ಸಿಬಿಐ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ನಿರ್ದೇಶನ ನೀಡಿದರು.

ಗುಜರಾತ್ನ ಕೆವಡಿಯಾದಲ್ಲಿ ಸಿವಿಸಿ ಮತ್ತು ಸಿಬಿಐನ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಷ್ಟೇ ಶಕ್ತಿಯುತ ವ್ಯಕ್ತಿಯಾಗಿದ್ದರೂ, ರಾಷ್ಟ್ರದ ಅಥವಾ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಿದೇಶಗಳಲ್ಲಿ ಆಶ್ರಯ ಪಡೆದಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಯಂತಹ ವ್ಯಕ್ತಿಗಳನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಕಾನೂನು ಪ್ರಕ್ರಿಯೆ ನಡೆಸಿರುವ ಸಮಯದಲ್ಲಿ ಪ್ರಧಾನಿ ಈ ನಿರ್ದೇಶನ ನೀಡಿದ್ದಾರೆ.

‘ಕಳೆದ ಆರೇಳು ವರ್ಷಗಳಲ್ಲಿ ನಮ್ಮ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳಿಂದಾಗಿ, ಭ್ರಷ್ಟಾಚಾರವನ್ನು ತಡೆಯಬಹುದು ಎಂಬ ನಂಬಿಕೆ ಜನರ ಮನಸ್ಸಿನಲ್ಲಿ ಮೂಡಿದೆ. ಮಧ್ಯವರ್ತಿಗಳ ಸಹಾಯವಿಲ್ಲದೆ ಸರ್ಕಾರದ ಯೋಜನೆಗಳ ಲಾಭವನ್ನು ಜನರು ಪಡೆಯುತ್ತಿದ್ದಾರೆ’ ಎಂದು ಅವರು ಹೇಳಿದರು.

ಭ್ರಷ್ಟಾಚಾರ ನಿಯಂತ್ರಿಸುವ ಇಚ್ಛಾಶಕ್ತಿ ಹಿಂದಿನ ಸರ್ಕಾರಕ್ಕೆ ಇರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ರಾಜಕೀಯ ಮತ್ತು ಆಡಳಿತಾತ್ಮಕ ಇಚ್ಛಾಶಕ್ತಿಯ ಕೊರತೆಯಿತ್ತು. ಇಂದು ರಾಜಕೀಯ ಇಚ್ಛಾಶಕ್ತಿಯಿಂದ ಆಡಳಿತಾತ್ಮಕ ಸುಧಾರಣೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಓದಿ:ರಾಹುಲ್ ಗಾಂಧಿಡ್ರಗ್ ಪೆಡ್ಲರ್ ಎಂಬಕಟೀಲ್ ಹೇಳಿಕೆಸರಿಯಲ್ಲ: ಬಿಎಸ್ ವೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.