ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ನಲ್ಲಿರುವ ವೀರ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಇಂದು ಉದ್ಘಾಟಿಸಿದರು.

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾಗಿರುವ ವೀರ ಸಾವರ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಹಾಗೂ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ, ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ. ಸಿಂಗ್ ಉಪಸ್ಥಿತರಿದ್ದರು.

ಕಟ್ಟಡವು ಶೆಲ್ ಆಕಾರದಲ್ಲಿದ್ದು, ದ್ವೀಪಗಳ ನೈಸರ್ಗಿಕ ಪರಿಸರವನ್ನು ಬಿಂಬಿಸುತ್ತದೆ.

ಸುಮಾರು ₹710 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಟರ್ಮಿನಲ್ ಸೌಲಭ್ಯವು ಕೇಂದ್ರಾಡಳಿತ ಪ್ರದೇಶವಾದ ದ್ವೀಪಕ್ಕೆ ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ಟರ್ಮಿನಲ್ ಕಟ್ಟಡವನ್ನು ಸುಮಾರು 40,800 ಚದರ ಮೀಟರ್ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. ವಾರ್ಷಿಕವಾಗಿ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.

₹80 ಕೋಟಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್ಬಸ್ -321 ಮಾದರಿಯ ವಿಮಾನಗಳಿಗೆ ಸೂಕ್ತವಾದ ರನ್ವೇ ಅನ್ನು ಸಹ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಒಂದೇ ಬಾರಿಗೆ 10 ವಿಮಾನಗಳನ್ನು ನಿಲ್ಲಿಸಬಹುದಾಗಿದೆ ಎಂದು ಪಿಎಂಒ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.